Sunday, October 1, 2023

Latest Posts

ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು, ವೀಕ್ಷಿಸೋದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ 76ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರತೀ ವರ್ಷ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ತ್ರಿವರ್ಣ ಧ್ವಜ ಹಾರಿಸಿ, ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದು ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಅಂಶವಾಗಿದೆ.

ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದ್ದು, ಇಂದು ಸಂಜೆ ಏಳು ಗಂಟೆಗೆ ರಾಷ್ಟ್ರಪತಿ ಭಾಷಣ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಭಾಷಣವನ್ನು ಜನರಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಆಲ್ ಇಂಡಿಯಾ ರೇಡಿಯೋ ಹಾಗೂ ದೂರದರ್ಶನದಲ್ಲಿ ಹಿಂದಿಯಲ್ಲಿ ಭಾಷಣ ಪ್ರಸಾರವಾಗಲಿದೆ. ತದನಂತರ ಇಂಗ್ಲಿಷ್ ಆವೃತ್ತಿಯನ್ನು ಪ್ರಸಾರ ಮಾಡಲಾಗುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!