ರಾಷ್ಟ್ರಪತಿ ಚುನಾವಣೆ| ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18, 2022 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಲಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ, ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಚುನಾವಣಾ ವೇಳಾಪಟ್ಟಿ

ಜೂನ್ 29- ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ

ಜುಲೈ 18- ಮತದಾನ ಪ್ರಕ್ರಿಯೆ

ಜುಲೈ 21- ಮತ ಎಣಿಕೆ ಕಾರ್ಯ

2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಜುಲೈ 25ರೊಳಗೆ ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಿರಬೇಕು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!