ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ಬೆಂಗಳೂರಿಗೆ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌,  ಬೆಂಗಳೂರು:
ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಗಳಾದ ದ್ರೌಪದಿ ಮುರ್ಮು ಅವರು 10.07.2022ರ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಅವರನ್ನು ಸ್ವಾಗತಿಸುವರು.
ಬಳಿಕ ಸಂಜೆ 4.00 ಗಂಟೆಗೆ ಬೆಂಗಳೂರಿನ ಶಾಂಘ್ರಿಲಾ ಹೋಟೆಲ್‍ನಲ್ಲಿ ನಡೆಯುವ ಸಂಸದರು, ಸಚಿವರು ಮತ್ತು ಶಾಸಕರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರಾದ ಕಿಶನ್ ರೆಡ್ಡಿ, ಪ್ರಲ್ಹಾದ ಜೋಶಿ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!