Wednesday, June 29, 2022

Latest Posts

ಇಂದಿನಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮೊದಲನೇ ದಿನವಾದ ಇಂದು ರಾಷ್ಟ್ರಪತಿ ಕೋವಿಂದ್‌ ಅವರು ಕಾರಸರಗೋಡಿನಲ್ಲಿನ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ನಾಳೆ 22ರಂದು ದಕ್ಷಿಣ ನೌಕಾ ಕಮಾಂಡ್‌ ನ ಕಾರ್ಯಾಚರಣೆಯ ಪ್ರದರ್ಶನವನ್ನು ವೀಕ್ಷಿಸಲು ಕೊಚ್ಚಿಗೆ ತೆರಳಲಿದ್ದಾರೆ. ನಂತರ ನೌಕಾ ನೆಲದಲ್ಲಿ ಇರುವ ವಿಕ್ರಾಂತ್‌ ಸೆಲ್‌ ಗೆ ಕೂಡ ಭೇಟಿ ನೀಡಲಿದ್ದಾರೆ.
ಮೂರನೇ ದಿನ ರಾಷ್ಟ್ರಪತಿ ಕೋವಿಂದ್‌ ಅವರು ರಾಜ್ಯ ರಾಜಧಾನಿ ತಿರುವನಂತಪುರದಲ್ಲಿ ಪಿ.ಎನ್.‌ ಪಣಿಕರ್‌ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ.24ಕ್ಕೆ ರಾಷ್ಟ್ರಪತಿಗಳು ದೆಹಲಿಗೆ ಹಿಂತಿರುಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss