Thursday, August 11, 2022

Latest Posts

ಅ.6ರಿಂದ ಮೂರು ದಿನಗಳ ಕಾಲ ರಾಷ್ಟ್ರಪತಿ ಕೋವಿಂದ್ ರಾಜ್ಯ ಪ್ರವಾಸ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅ.6ರಿಂದ ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅ.6ರಂದು ಬೆಂಗಳೂರಿನ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶತ ಜೊತೆ ಜಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.7ರಂದು ಚಾಮರಾಜನಗರದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಚಾಮರಾಜನಗರ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಯಡಬೆಟ್ಟದ ಮೆಡಿಕಲ್ ಕಾಲೇಜಿನ ಬಳಿ 163 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಅ.8ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss