Saturday, December 9, 2023

Latest Posts

ಒಡಿಶಾ ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಮೂರು ದಿನಗಳ ಕಾಲ ಒಡಿಶಾಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮುರ್ಮು ಅವರ ಭೇಟಿಯ ವೇಳೆ ‘ಅತುತ್-ಬಂಧನ್’ ಕುಟುಂಬದ ಪ್ರಾಯೋಜಿತ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಮಂಗಳವಾರ ಸಂಜೆ ಭುವನೇಶ್ವರದಲ್ಲಿ ರಾಜಭವನ ಒಡಿಶಾದ ಹೊಸ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.

ರಾಷ್ಟ್ರಪತಿಗಳು ಬುಧವಾರ ಕಟಕ್‌ನಲ್ಲಿ ಒಡಿಶಾ ಹೈಕೋರ್ಟ್‌ನ 75 ನೇ ವರ್ಷದ ಸಂಭ್ರಮಾಚರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದೇ ದಿನ ಕಟಕ್‌ನಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಒಡಿಶಾದ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವಾಲಯವು ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!