ಗುರುನಾನಕ್‌ ಜಯಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಸಿಖ್ ಧರ್ಮಕ್ಕೆ ಅಡಿಪಾಯ ಹಾಕಿದ ಸಿಖ್‌ ಗುರು ಗುರುನಾನಕ್‌ ಅವರ 553 ನೇ ಜನ್ಮದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಿಖ್ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.‌ ನ್ಯಾಯಯುತ ಮತ್ತು ಒಳ್ಳೆಯ ಸಮಾಜವನ್ನು ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ಶ್ರೀ ಗುರುನಾನಕ್ ದೇವ್ ಅವರ ಉದಾತ್ತ ಬೋಧನೆಗಳು ನಮಗೆ ಮಾರ್ಗದರ್ಶನ ನೀಡುತ್ತವೆ ಎಂದು ಪ್ರಧಾನಿ ಮೋದಿ ಆಶಿಸಿದರು.

ಶ್ರೀ ಗುರುನಾನಕ್ ದೇವ್ ಜೀ ಅವರ ಪ್ರಕಾಶ್ ಪುರಬ್ ಶುಭಾಶಯಗಳು. ಅವರ ಉದಾತ್ತ ಬೋಧನೆಗಳು ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜವನ್ನು ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ನಮಗೆ ಮಾರ್ಗದರ್ಶನ ನೀಡಲಿ ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಶ್ರೀ ಗುರುನಾನಕ್ ದೇವ್ ಜಿ ಅವರ 553 ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದ್ದರು.

ರಾಷ್ಟ್ರಪತಿ ಮುರ್ಮು ಅವರು ಗುರುನಾನಕ್ ದೇವ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಮತ್ತು ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. “ಗುರು ನಾನಕ್ ದೇವ್ ಜಿ ಅವರ ಜನ್ಮ ವಾರ್ಷಿಕೋತ್ಸವದ ಪವಿತ್ರ ಸಂದರ್ಭದಲ್ಲಿ, ನಾನು ಎಲ್ಲಾ ಸಹ ನಾಗರಿಕರಿಗೆ ಮತ್ತು ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ, ವಿಶೇಷವಾಗಿ ಸಿಖ್ ಸಮುದಾಯದ ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ” ಎಂದು ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಬೋಧನೆಗಳಿಂದ ಪ್ರತಿಯೊಬ್ಬರೂ ಸತ್ಯ, ತ್ಯಾಗ ಮತ್ತು ನೈತಿಕ ನಡವಳಿಕೆಯಂತಹ ಶಾಶ್ವತ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಗುರು ನಾನಕ್ ದೇವ್ ಜಿ ಅವರು ‘ಏಕ್ ಓಂಕಾರ’ ಸಂದೇಶವನ್ನು ಹರಡಿದರು ಅಂದರೆ ದೇವರು ಒಬ್ಬನೇ ಮತ್ತು ಎಲ್ಲೆಡೆ ಇದ್ದಾನೆ. ಅವರು ನಮಗೆ ಪ್ರೀತಿ, ಏಕತೆ ಮತ್ತು ಸಹೋದರತ್ವವನ್ನು ಭಾವನೆ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು. ಅವರ ಬೋಧನೆಗಳು ನಮಗೆ ಶಾಂತಿ ಮತ್ತು ಸಮೃದ್ಧಿಯ ಕಡೆಗೆ ಮಾರ್ಗದರ್ಶನ ನೀಡುತ್ತವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!