ಕ್ರೈಸ್ತರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿರುವ ದೇಶದ ಕ್ರೈಸ್ತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವಟ್ ಮಾಡಿರುವ ರಾಷ್ಟ್ರಪತಿಗಳು, ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು. ಈ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಸಾರುತ್ತದೆ. ನಾವು ಯೇಸುಕ್ರಿಸ್ತನ ಬೋಧನೆಗಳನ್ನು ನೆನಪಿಸೋಣ. ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಸಂಕಲ್ಪ ಮಾಡೋಣ ಎಂದು ಬರೆದುಕೊಂಡಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರು ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು. ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಸೌಹಾರ್ದತೆ ಮತ್ತು ಸಹಾನುಭೂತಿಯ ಚೈತನ್ಯವನ್ನು ಸಂಕೇತಿಸುವ ಕ್ರಿಸ್ ಮಸ್ ಹಬ್ಬವನ್ನು ಆಚರಿಸೋಣ. ಇಂದು ಕ್ರಿಸ್ತನ ಉದಾತ್ತ ಬೋಧನೆಗಳನ್ನು ಸ್ಮರಿಸೋಣ ಎಂದು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!