ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ರಾಜ್ಯಸಭೆಯಲ್ಲಿ 13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ, ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರೆ, 232 ಸದಸ್ಯರು ವಿರೋಧಿಸಿದರು.
ಪರ ವಿರೋಧಗಳ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ. ಇದೇ ವೇಳೆ ಮುರ್ಮು ಅವರು, ಮುಸಲ್ಮಾನ್ ವಕ್ಫ್ ಮಸೂದೆ 2025ಕ್ಕೆ ಒಪ್ಪಿಗೆ ನೀಡಿದ್ದಾರೆ.