May 2, 2026
Saturday, May 2, 2026
spot_img

ಎ.​ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ: ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿಯಲ್ಲಿ ಭಾಗಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎಪ್ರಿಲ್​ 1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ , ಮಾರ್ಚ್​​ 31ರಂದು ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಂದಿಳಿಯಲಿದ್ದಾರೆ. ಬಳಿಕ ಬೆಂಗಳೂರಿನ ಲೋಕ್ ಪಾಲ್ ಭವನದಲ್ಲಿ ವಾಸ್ತವ್ಯ ಹೂಡಲಿದ್ದು, ಎಪ್ರಿಲ್ 1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಿದ್ದಗಂಗಾ ಮಠದಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರುಶನ ಪಡೆಯಲಿದ್ದಾರೆ. ಬಳಿಕ ಮಠದ 10,000 ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಾಸೋಹದ ದಿನ ಎಂದು ಘೋಷಣೆ ಮಾಡುವ ಸಲುವಾಗಿ ಇಂದು ಪತ್ರ ಬರೆಯಲಿದ್ದೇನೆ ಎಂದು ತಿಳಿಸಿದರು.

ಈಗಾಗಲೇ ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂಬ ಕುರಿತು ಕೆಲಸ ಪ್ರಾರಂಭವಾಗಿದ್ದು, ಮುಂದಿನ ವರ್ಷ ಎಪ್ರಿಲ್​​​ ಒಂದರ ಒಳಗೆ ಪೂರ್ಣಗೊಳಿಸಬೇಕು ಎಂಬ ಇರಾದೆ ಇದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !