ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ಇಂದು ನಿಧನ ಹೊಂದಿದ್ದಾರೆ.
106 ವರ್ಷ ಪ್ರಾಯದ ಆನಂದ ಆಳ್ವ ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪ್ರಗತಿಪರ ರೈತರೂ ಆಗಿದ್ದ ಅವರು, ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.