ರಾಜಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್:‌ ಮಿಲಿಟರಿ ಶಕ್ತಿ ಪ್ರದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

73ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಜಪಥದಲ್ಲಿ ಇಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಧ್ವಜಾರೋಹಣ ಮಾಡಿದರು. ರಾಜಪಧದಲ್ಲಿ ಗಣರಾಜ್ಯೋತ್ಸವದ ವಿಶೇಷ ಪಥ ಸಂಚಲನ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು.
ರಾಜಪಥ್ ​ಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು. ರಾಮನಾಥ್ ಕೋವಿಂದ್​ ಪತ್ನಿ ಸವಿತಾ ಕೋವಿಂದ್ ಕೂಡ ಆಗಮಿಸಿದ್ದಾರೆ.
ಇಂದು ಭಾರತೀಯ ಮಿಲಿಟರಿಯ ಶಕ್ತಿ ಮತ್ತು ಸಾಂಸ್ಕೃತಿಕ ವೈವಿದ್ಯತೆಗಳ ಪ್ರದರ್ಶನ ನಡೆಯಲಿದ್ದು, ಆಜಾದಿ ಕಾ ಅಮೃತಮಹೋತ್ಸವದ ಭಾಗವಾಗಿ ಇಂದು ಅದ್ಧೂರಿ ಕಾರ್ಯಕ್ರಮ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!