Tuesday, August 16, 2022

Latest Posts

ಇಂದು ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆ ಅನಾವರಣ: ಹೈದರಾಬಾದ್‌ ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್ ನ ಮುಚ್ಚಿಂತಲ್ ನಲ್ಲಿ ಶಾಸ್ತ್ರೋಕ್ತವಾಗಿ ನಡೆಯುತ್ತಿರುವ ಶ್ರೀರಾಮಾನುಜಾಚಾರ್ಯ ಜನ್ಮಸಹಸ್ರಾಬ್ದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಮಧ್ಯಾಹ್ನ 3:30ರ ವೇಳೆಗೆ ಜೀವಾ ಆಶ್ರಮಕ್ಕೆ ತಲುಪಲಿದ್ದಾರೆ. ಅಲ್ಲಿರುವ ಶ್ರೀರಾಮಾನುಜಾಚಾರ್ಯರ ಸಮಾನತೆ ಪ್ರತಿಮೆಯ ಬಳಿ ಇರುವ ಚಿನ್ನದ ಮೂರ್ತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಫೆ.2ರಿಂದ ಹೈದರಾಬಾದ್ ನಲ್ಲಿ ಶ್ರೀರಾಮಾನುಜಾಚಾರ್ಯರ ಜನ್ಮ ಸಹಸ್ರಾಬ್ದಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಇಂದು ಮತ್ತು ನಾಳೆ ಈ ಜನ್ಮಸಹಸ್ರಾಬ್ದಿ ಕಾರ್ಯಕ್ರಮ ಮುಕ್ತಾಯಗೊಳ್ಳಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಿನ್ನೆ ಶನಿವಾರ ಟಾಲಿವುಡ್ ನಟ ಚಿರಂಜೀವಿ ದಂಪತಿ, ಜ್ಯೂ. ಎನ್ ಟಿ ಆರ್ ಕುಟುಂಬ, ಅಲ್ಲು ಅರ್ಜುನ್ ಕುಟುಂಬ ಸಮಾನತೆಯ ಪ್ರತಿಮೆ ಹಾಗೂ 108 ದಿವ್ಯ ದೇಶಗಳಿಗೆ ಭೇಟಿ ನೀಡಿದ್ದಾರೆ.
ಹೈದರಾಬಾದ್ನ ಹೊರವಲಯದಲ್ಲಿರುವ ಶ್ರೀರಾಮಾನುಜಾಚಾರ್ಯರ ಆಶ್ರಮದ 45 ಎಕರೆ ಸಂಕೀರ್ಣದಲ್ಲಿ 216 ಅಡಿ ಎತ್ತರದ ಪಂಚಲೋಹದ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಇದು ವಿಶ್ವದ ಅತ್ಯಂತ ಎತ್ತರದ ಮೂರ್ತಿಯಾಗಿದೆ. 1000 ಕೋಟಿ ರೂ. ವೆಚ್ಚದಲ್ಲಿ ಈ ಮೂರ್ತಿ ನಿರ್ಮಾಣ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss