ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯ ಚುನಾವಣಾ ಆಯುಕ್ತ ಹಾಗೂ ಇತರೆ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರೆ ಚುನಾವಣಾ ಆಯುಕ್ತರು ಮಸೂದೆ 2023ಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ.

ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರೆ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು, ಆಯ್ಕೆ ಸಮಿತಿಯ ರಚನೆಗೆ ಐದು ಮಂದಿಯ ಸಮಿತಿಯನ್ನು ರಚಿಸಲು ಕೇಂದ್ರ ಕಾನೂನು ಸಚಿವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಶ್ರೇಣಿಗಿಂತ ಕಡಿಮೆಯಿಲ್ಲದ ಇನ್ನಿಬ್ಬರು ವ್ಯಕ್ತಿಗಳ ಸಮಿತಿಯನ್ನು ರಚಿಸಲು ಈ ಕಾನೂನಿನಲ್ಲಿ ಅವಕಾಶ ಇದೆ.

ಜತೆಗೆ ‍ಪ್ರಧಾನಿ ಅವರ ಅಧ್ಯಕ್ಷತೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಓರ್ವ ಕೇಂದ್ರ ಸಚಿವರ ಸಮಿತಿಯು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರೆ ಚುನಾವಣಾ ಆಯುಕ್ತರನ್ನು ನೇಮಕ ಮಾಡಲು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುವ ಅವಕಾಶವೂ ಈ ಹೊಸ ಕಾನೂನಿನಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!