ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದ ಬೆನ್ನಲ್ಲೇ ತನ್ನ ಹುಟ್ಟೂರಾದ ರಾಯರಂಗಾಪುರದಲ್ಲಿರುವ ಶಿವನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮುಂಜಾನೆಯೇ ದೇವಾಲಯಕ್ಕೆ ತೆರಳಿದ ಮುರ್ಮು ಪೊರಕೆ ಹಿಡಿದು ಆಲಯದ ಅಂಗಳವನ್ನು ಸ್ವಚ್ಛಗೊಳಿಸಿದ ಬಳಿಕ ಪೂಜೆಯಲ್ಲಿ ಭಾಗಿಯಾದರು.
ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಮುರ್ಮು ಸರಳತೆಗೆ ಇನ್ನೊಂದು ತಾಜಾ ಉದಾಹರಣೆ ಎಂದು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಮುರ್ಮು ಸಂಸದರು, ಶಾಸಕರು ಮತ್ತು ದೇಶದ ವಿವಿಧ ಪಕ್ಷಗಳ ಪ್ರಮುಖ ನಾಯಕರನ್ನು ಭೇಟಿ ಮಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಬೆಂಬಲ ಕೋರುವ ಸಾಧ್ಯತೆ ಇದೆ.
#WATCH | Odisha: NDA's presidential candidate Draupadi Murmu sweeps the floor at Shiv temple in Rairangpur before offering prayers here. pic.twitter.com/HMc9FsVFa7
— ANI (@ANI) June 22, 2022