ರಾಷ್ಟ್ರಪತಿ ಚುನಾವಣೆ: ಯಶವಂತ್‌ ಸಿನ್ಹಾ ಇಂದು ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ 15 ನಿಮಿಷಕ್ಕೆ ಚುನಾವಣಾಧಿಕಾರಿಗೆ ಸಂಸತ್‌ ಭವನದಲ್ಲಿ ನಾಮಪತ್ರ ಸಲ್ಲಿಸಲಾಗುವುದು. ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಅನೆಕ್ಸ್‌ನಲ್ಲಿ ವಿರೋಧ ಪಕ್ಷದ ನಾಯಕರು ಸಭೆ ಸೇರಿ, ನಾಮಪತ್ರಕ್ಕೆ ಸಹಿ ಹಾಕಲಿದ್ದಾರೆ. ಅದಾದ ಬಳಿಕ ವಿಪಕ್ಷ ನಾಯಕರೆಲ್ಲ ಯಶವಂತ್ ಸಿನ್ಹಾ ಅವರೊಂದಿಗೆ ರ್ಯಾಲಿ ಮೂಲಕ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಕಚೇರಿಗೆ ಆಗಮಿಸಲಿದ್ದಾರೆ.

ಸಂಸತ್ ಆವರಣದಲ್ಲಿರುವ ಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಮಧ್ಯಾಹ್ನ 12:15 ಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 1.15ಕ್ಕೆ ಯಶವಂತ್ ಸಿನ್ಹಾ ಅವರೊಂದಿಗೆ ಪ್ರತಿಪಕ್ಷ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!