ರಾಷ್ಟ್ರಪತಿ ಚುನಾವಣೆ: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಮುನ್ನಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶದ ನೂತನ ರಾಷ್ಟ್ರಪತಿ ಆಗಿ ಯಾರು ಆಯ್ಕೆಯಾಗಲಿದ್ದಾರೆಂಬ ಕುತೂಹಲಕ್ಕೆ ಕೆಲ ಗಂಟೆಗಳಲ್ಲಿ ತೆರೆ ಬೀಳಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು,ಮೊದಲ ಸುತ್ತಿನ ಮತ ಎಣಿಕೆ ಫಲಿತಾಂಶವನ್ನ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ ಮೂಡಿ ಪ್ರಕಟಿಸಿದ್ದಾರೆ. ಇದರಲ್ಲಿ ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮ ಮುನ್ನಡೆ ಸಾಧಿಸಿದ್ದಾರೆ. ಮುರ್ಮ ಅವರಿಗೆ 540 ಮತಗಳು ಲಭಿಸಿದ್ದು, ಒಟ್ಟು ಮತದ ಮೌಲ್ಯ 3,78,000 ಆಗಿದೆ. ಅದೇ ವೇಳೆ ಯಶವಂತ್​ ಸಿನ್ಹಾ ಅವರಿಗೆ 1,45,600 ಮೌಲ್ಯದ 208 ಮತಗಳು ಲಭಿಸಿದೆ. 15 ಮತಗಳು ಅಸಿಂಧುವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!