ರಾಷ್ಟ್ರಪತಿ ಚುನಾವಣೆ: ವ್ಹೀಲ್ ಚೇರ್‌ನಲ್ಲಿ ಬಂದು ಮತ ಹಾಕಿದ ಮಾಜಿ ಪ್ರಧಾನಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷ ಯುಪಿಎ ಮೈತ್ರಿಕೂಟದಿಂದ ಯಶವಂತ್ ಸಿನ್ಹಾ ಸ್ಪರ್ಧೆಗೆ ಇಳಿದಿದ್ದಾರೆ.
ಇಂದು ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮತದಾನ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ವ್ಹೀಲ್ ಚೇರ್ ಮೂಲಕ ಬಂದು ಮತ ಹಾಕಿದರು.
90 ವರ್ಷದ ಎಚ್‌ಡಿ ದೇವೇಗೌಡ ಅವರಿಗೆ ಇತ್ತೀಚೆಗೆ ಆರೋಗ್ಯ ಸರಿ ಇರಲಿಲ್ಲ. ಇದರಿಂದ ಅವರು ವಿಶ್ರಾಂತಿಯಲ್ಲಿದ್ದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವ್ಹೀಲ್‌ ಚೇರ್‌ನಲ್ಲಿ ಬಂದು ತಮ್ಮ ಹಕ್ಕು ಚಲಾಯಿಸಿದರು.


ಇನ್ನೂ 89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಭವನಕ್ಕೆ ವ್ಹೀಲ್ ಚೇರ್ ಮೂಲಕ ಬಂದು ಮತವನ್ನು ಹಾಕಿದರು. ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ ಭವನಕ್ಕೆ ಬಂದು ಮತ ಹಾಕಿದರು.
ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಈಗ 90 ವರ್ಷ. ಆದರೂ ಸಹ ಅವರು ಪಕ್ಷ ಸಂಘಟನೆ ಅಂತ ಓಡಾಡುತ್ತಲೇ ಇರುತ್ತಾರೆ. ಆದ್ರೆ, ಇದುವರೆಗೂ ಅವರು ಸಾರ್ವಜನಿಕವಾಗಿ ವ್ಹೀಲ್ ಚೇರ್‌ ಬಳಸಿಲ್ಲ.ರಾಷ್ಟ್ರಪತಿ ಚುನಾವಣೆಗೆ ಮತ ಹಾಕಲು ಇದೇ ಮೊದಲ ಬಾರಿಗೆ ದೇವೇಗೌಡ ಅವರು ಸಾರ್ವಜನಿಕವಾಗಿ ವ್ಹೀಲ್‌ ಚೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!