ರಾಷ್ಟ್ರಪತಿ ಚುನಾವಣೆ: ಜೆಡಿಎಸ್ ನಿಂದ ದ್ರೌಪದಿ ಮುರ್ಮುಗೆ ಬೆಂಬಲ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಪಕ್ಷದಿಂದ ಕೂಡ ಬೆಂಬಲ ಘೋಷಿಸಲಾಗಿದೆ.
ಇಂದು ವಿಧಾನಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯ ಉಪ ನಾಯಕ ಬಂಡೆಪ್ಪ ಕಾಶಂಪೂರ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಎನ್ ಡಿ ಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಲಾಗುತ್ತಿದೆ ಎಂದರು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಂಸತ್ ನಲ್ಲಿ ಮಹಿಳಾ ಮೀಸಲಾತಿಯ ಬಗ್ಗೆ ಧ್ವನಿ ಎತ್ತಿದ್ದಾರೆ. ಆ ನಿಟ್ಟಿನಲ್ಲಿ ಮಹಿಳೆಗೆ ಬೆಂಬಲಿಸೋ ನಿಟ್ಟಿನಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲಿಸಲಾಗುತ್ತಿದೆ. ನಾವು ಪಕ್ಷ ಯಾವುದೆಂದು ನೋಡುತ್ತಿಲ್ಲ. ಆದಿವಾಸಿ ಜನಾಂಗದವರಾಗಿದ್ದರಿಂದ ಬೆಂಬಲ ನೀಡುತ್ತಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!