ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸೋನಿಯಾಗಾಂಧಿ ತಂತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನೂತನ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ.

ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದಾರೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಸೇರಿದಂತೆ ಪ್ರತಿಪಕ್ಷ ನಾಯಕರನ್ನು ಸಂಪರ್ಕಿಸಿ ರಾಷ್ಟ್ರಪತಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಾರನ್ನು ನಾಮನಿರ್ದೇಶನ ಮಾಡಬೇಕು ಎಂಬ ಬಗ್ಗೆ ಒಮ್ಮತ ಮೂಡಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದು “ಎನ್‌ಡಿಎಯೇತರ ಹಾಗೂ ಯುಪಿಎಯೇತರ ಪಕ್ಷಗಳ ಮನಸ್ಥಿತಿಯನ್ನು ಕಂಡುಹಿಡಿಯುವ ಕೆಲಸವನ್ನು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಅವರು ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಸಂಭಾವ್ಯ ಹೆಸರುಗಳನ್ನು ಕಂಡುಹಿಡಿಯುತ್ತಾರೆ” ಎಂದಿರುವ ಕುರಿತು ಮೂಲಗಳು ವರದಿ ಮಾಡಿವೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!