ರಾಷ್ಟ್ರಪತಿ ಚುನಾವಣೆ: ಉದ್ಧವ್ ಠಾಕ್ರೆ ಬೆಂಬಲ ಯಾರಿಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪತಿ ಚುನಾವಣೆಗೆ ಇನ್ನೆನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಹೀಗಾಗಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಚರ್ಚಿಸಲು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಎಲ್ಲಾ ಸಂಸದರ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಶಿವಸೇನೆಯ 19 ಸಂಸದರ ಪೈಕಿ 15 ಮಂದಿ ಹಾಜರಾಗಿದ್ದು, 4 ಮಂದಿ ಗೈರು ಹಾಜರಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ತಮ್ಮ ನಿಲುವು ಏನು ಎಂಬ ಬಗ್ಗೆ ಘೋಷಿಸುವುದಾಗಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.
ಎನ್​​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಬೇಕು ಎಂದು ಈ ವೇಳೆ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಇತ್ತ ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಮತ ಹಾಕುವಂತೆ ಶಿವಸೇನೆ ಸಂಸದ ಸಂಜಯ್ ರಾವುತ್ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಹುತೇಕ ಸಂಸದರು ಎನ್​ಡಿಎ ಅಭ್ಯರ್ಥಿಗೆ ಬೆಂಬಲ ಸೂಚಿಸಬೇಕು ಎಂಬ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ದವ್ ಠಾಕ್ರೆ ಕೈಗೊಳ್ಳುವ ತೀರ್ಮಾನ ಕುತೂಹಲ ಕೆರಳಿಸಿದೆ. ಈಗಾಗಲೇ 40 ಶಾಸಕರು ಬಂಡಾಯ ಎದ್ದು ಹೊಸ ಸರ್ಕಾರ ರಚನೆ ಮಾಡಿದ್ದಾರೆ.ಈ ನಡುವೆ 14ಕ್ಕೂ ಹೆಚ್ಚು ಸಂಸದರು ಬಂಡಾಯ ಏಳುವ ಸಾಧ್ಯತೆ ಇದೆ ಎಂಬ ಗುಸು ಗುಸು ಇದೆ. ಈ ಕಾರಣದಿಂದಾಗಿ ಸಂಸದರ ಸಭೆ ಕರೆದಿರುವ ಮಾಜಿ ಸಿಎಂ ಠಾಕ್ರೆ, ಚರ್ಚೆ ನಡೆಸಿದ್ದಾರೆ.
ಎಲ್ಲರ ಅಭಿಪ್ರಾಯ ಪಡೆದಿರುವ ಅವರು, ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!