ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ವೈಭವದ ದಸರಾ ಜರುಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ ನೆರವೇರಿಸಲಿದ್ದಾರೆ. ಈಗಾಗಲೇ ರಾಷ್ಟ್ರಪತಿಗಳು ಚಾಮುಂಡಿ ಬೆಟ್ಟ ತಲುಪಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇದಾದ ನಂತರ ದೇವಾಲಯದ ಆವರಣದಲ್ಲಿರುವ ವೇದಿಕೆಯಲ್ಲಿ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ.
ಮೈಸೂರು ಬಂದಿಳಿದ ದ್ರೌಪದಿ ಮುರ್ಮು ಅವರಿಗೆ ಬುಡಕಟ್ಟು ಜನರು ಹಾಗೂ ಹಾಡಿ ನಿವಾಸಿಗಳು ನೃತ್ಯದ ಮೂಲಕ ಸ್ವಾಗತ ಕೋರಿದ್ದಾರೆ. ಅವರಿಗೆ ನೀಡಲು ಹಲವು ಉಡುಗೊರೆಗಳನ್ನೂ ತಂದಿದ್ದಾರೆ. ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ ಕೋರಿದ್ದಾರೆ.