ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆಗಸ್ಟ್ 13ರ ನಂತರ ಇನ್ನೂ ಆರು ತಿಂಗಳು ವಿಸ್ತರಿಸಲು ಅನುಮೋದನೆ ಕೋರಿ ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ನಿರ್ಣಯ ಮಂಡಿಸಿದೆ.
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇಂದು ಮಂಡಿಸಿದ್ದಾರೆ.
ಮಣಿಪುರದಲ್ಲಿ ಕಳೆದ ಫೆಬ್ರವರಿ 13 ರಂದು ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದ್ದು, ಏಪ್ರಿಲ್ 2 ರಂದು ಸದನವು ಅದನ್ನು ಅಂಗೀಕರಿಸಿದೆ ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದರು.
ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ ಆರು ತಿಂಗಳು ವಿಸ್ತರಿಸಬೇಕಾದರೆ, ಶಾಸನಬದ್ಧ ನಿರ್ಣಯವನ್ನು ಸಂಸತ್ತಿನ ಎರಡೂ ಸದನಗಳು ಅನುಮೋದಿಸಬೇಕಾಗುತ್ತದೆ ಎಂದು ಬಿರ್ಲಾ ಹೇಳಿದರು.