ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಪತ್ರಿಕಾ ಸೆನ್ಸಾರ್‌ಶಿಪ್ ನಡೆಯುತ್ತಿದೆ ಎಂದು ಎಕ್ಸ್ (X) ಮಾಡಿದ್ದ ಗಂಭೀರ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.
ರಾಯಿಟರ್ಸ್ ಸುದ್ದಿ ಸಂಸ್ಥೆಯ ಎರಡು ಖಾತೆಗಳು ಸೇರಿದಂತೆ 2,300 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಭಾರತದಲ್ಲಿ ನಡೆಯುತ್ತಿರುವ ಪತ್ರಿಕಾ ಸೆನ್ಸಾರ್‌ಶಿಪ್ ತೀವ್ರ ಕಳವಳ ಮೂಡಿಸಿದೆ ಎಂದು ಎಕ್ಸ್ ಆರೋಪ ಮಾಡಿದೆ.
ಎಲಾನ್ ಮಸ್ಕ್ ಒಡೆತನದ ‘ಎಕ್ಸ್’ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದ, ಭಾರತ ಸರ್ಕಾರ ಜುಲೈ 3 ರಂದು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತದಲ್ಲಿ 2,355 ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿದೆ. ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಒಂದು ಗಂಟೆಯೊಳಗೆ ಯಾವುದೇ ಸಮರ್ಥನೆಯನ್ನು ನೀಡದೆ, ತಕ್ಷಣದ ಕ್ರಮ ಕೈಗೊಳ್ಳುವಂತೆ ತಿಳಿಸಿತು. ಮುಂದಿನ ಸೂಚನೆ ಬರುವವರೆಗೆ ಖಾತೆಗಳನ್ನು ನಿರ್ಬಂಧಿಸುವಂತೆ ಒತ್ತಾಯಿಸಿತು ಎಂದು ಆರೋಪ ಮಾಡಿದೆ.
ಆದ್ರೆ ಎಕ್ಸ್‌ನ ಆರೋಪಗಳನ್ನು ಭಾರತ ಸರ್ಕಾರ ನಿರಾಕರಿಸಿದೆ. ‘ಸರ್ಕಾರವು ಜುಲೈ 3 ರಂದು ಯಾವುದೇ ಹೊಸ ನಿರ್ಬಂಧ ಆದೇಶವನ್ನು ಹೊರಡಿಸಿಲ್ಲ. ರಾಯಿಟರ್ಸ್ ಮತ್ತು ರಾಯಿಟರ್ಸ್ ವರ್ಲ್ಡ್ ಸೇರಿದಂತೆ ಯಾವುದೇ ಪ್ರಮುಖ ಅಂತರರಾಷ್ಟ್ರೀಯ ಸುದ್ದಿ ವಾಹಿನಿಗಳನ್ನು ನಿರ್ಬಂಧಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.