ನಟ ದರ್ಶನ್ ಬಂಧಿಸದಂತೆ ಒತ್ತಡ: ಡಿ.ಕೆ. ಶಿವಕುಮಾರ್ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಬಂಧಿಸದಂತೆ ಯಾರೂ ನನ್ನ ಜೊತೆ ಮಾತನಾಡಿಲ್ಲ. ಕೇಸ್ ಆಗಿ 24 ಗಂಟೆ ಬಳಿಕ ನನಗೆ ವಿಚಾರ ಗೊತ್ತಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನನ್ನೊಂದಿಗೆ ಯಾರೂ ಮಾತನಾಡಿಲ್ಲ. ಯಾವ ಒತ್ತಡವೂ ಇಲ್ಲ. 24 ಗಂಟೆಯಾದ ಮೇಲೆ ನನಗೆ ವಿಚಾರ ಗೊತ್ತಾಗಿದೆ. ವಿಷಯ ತಿಳಿದು ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!