ಪ್ರಧಾನಿ ಮೋದಿಗೆ ಪ್ರತಿಷ್ಠಿತ ‘ಶಿವ ಸಮ್ಮಾನ್’ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವನ ರಾಜಮನೆತನ ನೀಡುವ ಪ್ರತಿಷ್ಠಿತ ‘ಶಿವ ಸಮ್ಮಾನ್’ (Shiv Samman Award) ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ (Maharashtra) ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿಯವರನ್ನು ನಾನು ಅಭಿನಂದಿಸುತ್ತೇನೆ. ಇದು ಎಲ್ಲಾ ಶಿವ ಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತದ ಶ್ರೇಷ್ಠ ಮತ್ತು ಆದರ್ಶ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹೆಸರಿನಲ್ಲಿ ರಾಜಮನೆತನದವರು ನೀಡುವ `ಶಿವ ಸಮ್ಮಾನ್ ಪ್ರಶಸ್ತಿ’ಯನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಗುವುದು. ಇದು ಎಲ್ಲಾ ಶಿವಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಪೊಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!