ಚುನಾವಣಾ ಅಕ್ರಮಕ್ಕೆ ತಡೆ: 1,000 ಕೋಟಿ ಮೌಲ್ಯದ ನಗದು, ಮದ್ಯ ಮಾದಕ ವಸ್ತು ಜಪ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ, ಜಾರ್ಖಂಡ್‌ ಸೇರಿದಂತೆ ಉಪಚುನಾವಣೆ ನಡೆಯುತ್ತಿರುವ 14 ರಾಜ್ಯಗಳಲ್ಲಿ ಒಟ್ಟು 1,000 ಕೋಟಿ ರೂ. ಮೌಲ್ಯದ ನಗದು, ಮದ್ಯ ಹಾಗೂ ಇತರ ಮಾದಕ ವಸ್ತುಗಳನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಈ 1,000 ಕೋಟಿ ಪೈಕಿ 858 ಕೋಟಿ ಮೌಲ್ಯದ ವಸ್ತುಗಳನ್ನು ಮಹಾರಾಷ್ಟ್ರ ಜಾರ್ಖಂಡ್‌ನಲ್ಲೇ ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರ, ಜಾರ್ಖಂಡ್‌ ಸೇರಿದಂತೆ 14 ರಾಜ್ಯಗಳಿಗೆ ಉಪಚುನಾವಣೆ ಘೋಷಣೆಯಾದ ದಿನಾಂಕದಿಂದ ಈವರೆಗೆ ನಗದು ಸೇರಿ ಒಟ್ಟು 1,000 ಕೋಟಿ ರೂ. ಮೌಲದು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅವುಗಳಲ್ಲಿ ಕೆಲ ಪ್ರಕರಣಗಳು ಗಮನ ಸೆಳೆದಿವೆ. ಕಾರ್ಯಾಚರಣೆ ಸಂದರ್ಭದಲ್ಲಿ ಪಾಲ್ಘರ್ ಜಿಲ್ಲೆಯ ವಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ಜೀಪ್‌ನಿಂದ 3.70 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಬುಲ್ಧಾನಾ ಜಿಲ್ಲೆಯ‌ ಮತ್ತೊಂದು ಪ್ರಕರಣದಲ್ಲಿ ಎಸಿಯಲ್ಲಿ ಬಚ್ಚಿಟ್ಟಿದ್ದ 4.51 ಕೋಟಿ ಮೌಲ್ಯದ 4,500 ಕೆಜಿ ಗಾಂಜಾ ಗಿಡಗಳು ಹಾಗೂ 5.20 ಕೋಟಿ ರೂ. ಮೌಲ್ಯದ ಬೆಳ್ಳಿಯ ಬಾರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತದಾನ ಪೂರ್ಣಗೊಳ್ಳುವವರೆಗೆ ಯಾವುದೇ ಪ್ರಚೋದನೆಗೆ ಒಳಗಾಗದಂತೆ ಅಕ್ರಮ ತಡೆಯುವಂತೆಮು ಚುನಾವಣಾಧಿಕಾರಿ ರಾಜೀವ್ ಕುಮಾರ್ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದು 2019ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಪ್ರಮಾಣಕ್ಕಿಂತ 7 ಪಟ್ಟು ಹೆಚ್ಚು ಹೆಚ್ಚಾಗಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 103.61 ಕೋಟಿ ರೂ. ಹಾಗೂ ಜಾರ್ಖಂಡ್‌ನಲ್ಲಿ18.76 ಕೋಟಿ ರೂ. ಮೌಲ್ಯದ ನಗದು, ಮದ್ಯ ಹಾಗೂ ಇತರ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೇ ವರ್ಷ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ದೇಶಾದ್ಯಂತ ಒಟ್ಟು 8,889 ಕೋಟಿ ಮೌಲ್ಯದ ನಗದು, ಡ್ರಗ್ಸ್‌, ಮದ್ಯ ಜಪ್ತಿ ಮಾಡಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!