ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನೇದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ, ಎಲ್ಪಿಜಿ ದರ, ಟೋಲ್ ಶುಲ್ಕ ಮತ್ತು ವಿಮಾನ ಪ್ರಯಾಣ ವೆಚ್ಚಗಳ ವಿಚಾರವಾಗಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಾಮಾನ್ಯ ಜನರ ಮೇಲಿನ ಆರ್ಥಿಕ ಭಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಆರೋಪಿಸಿದರು.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಇತ್ತೀಚೆಗೆ ಮತ್ತಷ್ಟು ಏರಿಕೆ ಕಂಡುಬಂದಿದ್ದು, ಗೃಹಬಳಕೆಯ ಸಿಲಿಂಡರ್ ಬೆಲೆಯೂ ₹900 ಗಡಿ ದಾಟಿದೆ. ಇದರಿಂದ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ಅವರು ಹೇಳಿದರು. ಜೊತೆಗೆ ಏಪ್ರಿಲ್ 1ರಿಂದ ಟೋಲ್ ದರ ಹೆಚ್ಚಳ ಜಾರಿಗೆ ಬಂದಿರುವುದು ವಾಹನ ಸವಾರರ ಮೇಲೆ ಹೆಚ್ಚುವರಿ ಹೊರೆ ತಂದಿದೆ ಎಂದು ಟೀಕಿಸಿದರು.
ಇದನ್ನೂ ಓದಿ:
ವಿಮಾನ ಇಂಧನ ದರ ಏರಿಕೆಯಿಂದ ದೇಶೀಯ ವಿಮಾನ ಟಿಕೆಟ್ಗಳ ಬೆಲೆ 10ರಿಂದ 15 ಶೇಕಡಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ. ಔಷಧಿ, ಸಿಮೆಂಟ್, ಖಾದ್ಯ ತೈಲ ಮತ್ತು ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಉಲ್ಲೇಖಿಸಿ, ಜನರ ಜೇಬಿಗೆ ನಿರಂತರ ಹೊಡೆತ ಬೀಳುತ್ತಿದೆ ಎಂದು ಆರೋಪಿಸಲಾಗಿದೆ.
ಈ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬೆಲೆ ಏರಿಕೆ ವಿಚಾರ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ.



