BIG NEWS | ಬೆಲೆ ಏರಿಕೆ ಬರೆ! ಮತ್ತೆ ಹೆಚ್ಚಾಯ್ತು ನಂದಿನಿ ಹಾಲಿನ ರೇಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ​ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಹಕರಿಗೆ ಹಾಲು ಬಿಸಿತುಪ್ಪವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!