ಸಿದ್ದರಾಮಯ್ಯ ಸರ್ಕಾರದಿಂದ ಬೆಲೆ ಏರಿಕೆ ಭಾಗ್ಯ ನಿರಂತರ: ಬಿ.ವೈ. ವಿಜಯೇಂದ್ರ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಕಳೆದ 20 ತಿಂಗಳಲ್ಲಿ ಬೆಲೆ ಏರಿಕೆ ಭಾಗ್ಯವನ್ನು ನಿರಂತರವಾಗಿ ದಯಪಾಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಈಗಾಗಲೇ ಹಾಲಿನ ದರ, ಪೆಟ್ರೋಲ್-ಡೀಸೆಲ್ ದರ, ಸ್ಟಾಂಪ್ ಡ್ಯೂಟಿ, ನೀರಿನ ದರ, ವಿದ್ಯುತ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಇದರ ವಿರುದ್ದ ಏ. 2 ರಂದು ಮೊದಲನೇ ಹಂತದ ಹೋರಾಟವನ್ನು ಕೈಗೆತ್ತಿಕೊಳ್ಳುತ್ತಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಜನತೆಗೆ ತಿಳಿಸಲು ಹಾಗೂ ಮುಸ್ಲಿಂರಿಗೆ ಶೇ. 4 ರಷ್ಟು ಮೀಸಲಾತಿಯನ್ನು ಸರ್ಕಾರಿ ಕಾಮಗಾರಿಯಲ್ಲಿ ನೀಡಿರುವುದನ್ನು ವಿರೋಧಿಸಿ ಏ. 7 ರಂದು ಎರಡನೇ ಹಂತದ ಮೈಸೂರಿನಿಂದ ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳಲಾಗುವುದು ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!