ಕರ್ನಾಟಕದ ಎಲ್ಲಾ ಪೆಟ್ರೋಲ್ ಬಂಕ್​ಗಳಲ್ಲಿ ಕನ್ನಡದಲ್ಲಿ ದರ ಪಟ್ಟಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

 ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಎಲ್ಲಾ ಪೆಟ್ರೋಲ್ ಬಂಕ್​ಗಳಲ್ಲಿ ನಾಳೆಯಿಂದ ಪೆಟ್ರೋಲ್, ಡೀಸೆಲ್ ದರ (Petrol, Diesel Price) ಪಟ್ಟಿ ಕನ್ನಡದಲ್ಲೂ ತೋರಿಸಲಾಗುತ್ತದೆ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಹೇಳಿದ್ದಾರೆ.

ಹಿಂದಿ ಹೇರಿಕೆ ಆರೋಪ ಮತ್ತು ಕರ್ನಾಟಕದಲ್ಲಿ ಶೇ.60 ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಹೋರಾಟ ನಡೆಯುತ್ತಿರುವ ನಡುವೆ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹರ್ದೀಪ್ ಸಿಂಗ್ ಪುರಿ, ನಾಳೆಯಿಂದಲೇ ಪೆಟ್ರೋಲ್​ ಬಂಕ್​ಗಳಲ್ಲಿ ದರ ಪಟ್ಟಿ ಕನ್ನಡದಲ್ಲಿ ಇರಲಿದೆ. ಕನ್ನಡದಲ್ಲಿ ದರ ಪಟ್ಟಿ ಪ್ರಕಟಿಸುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ರಾಮಲಲ್ಲಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದ್ದು, ಈ ದಿನದಂದು ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ರಾಮ ಹಾಗೂ ಆಂಜನೇಯನ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರ ಸುತ್ತೋಲೆ ಹೊರಡಿಸಿರುವುದನ್ನು ಸ್ವಾಗತಿಸಿದ ಕೇಂದ್ರ ಸಚಿವರು, ಈ ಮೂಲದ ಸನಾತನ ಸಂಸ್ಕೃತಿ ಕಾಂಗ್ರೆಸ್​ನವರೂ ಒಪ್ಪಿದ್ದಾರೆ ಎಂದರ್ಥ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!