ಹೊಸ ದಿಗಂತ ವರದಿ, ಶಿವಮೊಗ್ಗ:
ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಮುಂದಿಟ್ಟುಕೊಂಡು ಜನರ ಅನುಕಂಪ ಪಡೆಯಲು ಯತ್ನಿಸುತ್ತಿರುವುದು ಸರಿಯಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಬೆಲೆ ಏರಿಕೆ ಆಗಿದೆ. ನಾವು ಪ್ರತಿಪಕ್ಷದಲ್ಲಿ ಇದ್ದಾಗ ವಿರೋಧ ಮಾಡಿದ್ದೇವೆ. ಆದರೆ ಅದನ್ನು ರಾಜಕೀಯವಾಗಿ ಬಳಸಿಕೊಂಡಿಲ್ಲ. ಈಗ ಕಾಂಗ್ರೆಸ್ ನವರು ರಾಜಕೀಯವಾಗಿ ಬಳಸಿಕೊಳ್ಳಲುಮುಂದಾಗುತ್ತಿದ್ದಾರೆಂದು ಹರಿಹಾಯ್ದರು.
ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಒಳ್ಳೆಯ ಚರ್ಚೆಗಳು ನಡೆದಿದ್ದು ನಿಜಕ್ಕೂ ಸಮಾಧಾನ ತಂದಿವೆ. ಆದರೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಬಂದಂತಹ ಸಂದರ್ಭದಲ್ಲಿ ಕಾಂಗ್ರೆಸ್ ಕಲಾಪ ಬಹಿಷ್ಕಾರ ಮಾಡಿದ್ದು ಬೇಸರ ತರಿಸಿತು ಎಂದರು.
ಎಲ್ಲಾ ಪ್ರಶ್ನೆಗಳಿಗೂ ಸಿಎಂ ಉತ್ತರ ನೀಡಿದ್ದಾರೆ. ಆದರೆ ವಿರೋಧ ವ್ಯಕ್ತಪಡಿಸಿದರೆ ಜನರು ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಕಾಂಗ್ರೆಸ್ನವರು ಇದ್ದಾರೆ. ಆದರೆ ಜನ ಬಿಜೆಪಿಯೊಂದಿಗೆ ಇದ್ದಾರೆ ಎಂಬುದು ಈಗಾಗಲೇ ಸಾಬೀತಾಗಿದೆಎಂದರು.