ಹೊಸದಿಗಂತ ಡಿಜಿಟಲ್ ಡೆಸ್ಕ್
ದುರ್ಗಾದೇವಿ ದೇವಸ್ಥಾನದ ಅರ್ಚಕರೊಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿದ್ದರಾಮಯ್ಯ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹದೇವಪ್ಪ ಪೂಜಾರಿ ಕೇಂದ್ರದ ಎನ್‌ಡಿಎ ಸರ್ಕಾರ ಪತನವಾಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.
ಇದಲ್ಲದೇ ಸಿದ್ದರಾಮಯ್ಯನವರ ಸ್ಥಾನ ರಾಜ್ಯದ ಪಾಲಿಗೆ ಸೂಕ್ಷ್ಮ ವಿಚಾರ. ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಕಾಂಗ್ರೆಸ್ ಟ್ರಬಲ್ ಶೂಟರ್, ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಅರ್ಚಕ ಮಹದೇವಪ್ಪ ಪೂಜಾರಿ ಈ ಹಿಂದೆ ಭವಿಷ್ಯ ನುಡಿದಿದ್ದರು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.
ದೇವಿ ಕನಸಲ್ಲಿ ಬಂದು 9 ಜನ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದರು. ಕೊನೆಗೆ ಇಬ್ಬರಿಗೆ ಸಿಎಂ ಸ್ಥಾನ ನೀಡಲು ಪ್ರೇರಣೆ ನೀಡಿದಳು. ಆಗ ನಾನು ಡಿ.ಕೆ.ಶಿವಕುಮಾರ್ ಅವರಿಗೆ ಹೂವಿನ ಹಾರ ಹಾಕು ಎಂದೆ. ಆದರೆ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಿದ್ದರು. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಎರಡನೇ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕಾಲ ಬಂದಿದೆ ಎಂದು ಅರ್ಚಕರು ಹೇಳಿದ್ದಾರೆ.