ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕೊರೋನಾ ಆತಂಕ ಹಿನ್ನೆಲೆ ಸದ್ಯ ಪ್ರಾರ್ಥಮಿಕ ಶಾಲೆ ಆರಂಭ ಮಾಡದಿರುವುದು ಸೂಕ್ತ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಜೊತೆಗೆ ಸಾಲುಸಾಲು ಹಬ್ಬಗಳು ಇರುವುದರಿಂದ ಸೋಂಕು ಹೆಚ್ಚುವ ಭೀತಿ ಇದೆ.
ಈ ಕಾರಣಗಳಿಂದ ಪ್ರಾಥಮಿಕ ಶಾಲೆ ಈಗಲೇ ತೆರೆಯುವುದು ಒಳ್ಳೆಯದಲ್ಲ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಆನ್ಲೈನ್ ತರಗತಿ ಮುಂದುವರಿಯಲಿದೆ. ಇನ್ನು ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೆ.6ರಿಂದ ಶಾಲೆ ಆರಂಭವಾಗಲಿದೆ.