ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮ ಪಂಚಾಯಿತಿ ಸದಸ್ಯ, ಅಧ್ಯಕ್ಷ ಆದ್ರೆ ಸಾಕು ಜನರಿಗೆ ಅಹಂ ಬಂದು ಬಿಡುತ್ತದೆ. ಅದೆಲ್ಲವನ್ನೂ ಮೀರಿ ನಿಂತವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ. ಈ ವೇಳೆ, ಸಿಂಗ್ 10 ವರ್ಷ ಪ್ರಧಾನಿಯಾಗಿದ್ದರೂ ಸಹ ಅಹಂ ಅವರ ಬಳಿ ಸುಳಿಯಲಿಲ್ಲ. ಅವರು ಎಂದು ರಾಜಕಾರಣ ಮಾಡಿಲ್ಲ, ಎಲ್ಲರ ಜೊತೆ ಬಹಳ ಸೌಜನ್ಯದಿಂದ ನಡೆದುಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯ ಘನತೆಯನ್ನು ಉಳಿಸಿಕೊಂಡರು. ಅವರ ವಿರುದ್ಧ ತಿರುಗಿ ಬಿದ್ದರೂ ವಿಚಲಿತರಾಗದೆ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ದೇಶದ ಉತ್ಕೃಷ್ಟ ರಾಜಕಾರಣಿ. ಅವರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ತಿಳಿಸಿದರು.