ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ವಿಮಾನ ಪ್ರಯಾಣದ ಬಗೆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಟಕ್ಕರ್ ನೀಡಿರುವ ಸಂಸದ ಪ್ರತಾಪ್ ಸಿಂಹ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿಮಾನದಲ್ಲೇ ಓಡಾಡುತ್ತಾರೆ. ಖಾಸಗಿ ಜೆಟ್ನಲ್ಲಿ ತಮ್ಮ ಪಟಾಲಂ, ಛೇಲಾ, ದುಡ್ಡು ಕೊಡುವವರ ಜೊತೆ ಓಡಾಡುವುದಿಲ್ಲ ಎಂದು ಕುಟುಕಿದ್ದಾರೆ!
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಪ್ರಧಾನಿ ಒಬ್ಬರೇ ಇರುವುದು. ಅದೇ ದೇಶದಲ್ಲಿ ೨೯ ಮಂದಿ ಮುಖ್ಯಮಂತ್ರಿಗಳಿದ್ದಾರೆ. ಪ್ರಧಾನಿಗೆ ನಿಮ್ಮನ್ನು ನೀವು ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಚಾಟಿ ಬೀಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ