ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಳ್ಳಲಾದ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ.
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಪ್ರಧಾನಿ ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಿದ್ದಾರೆ.
ಪ್ರಧಾನಿ ಮೋದಿ ಅವರಲ್ಲಿ ಕಾಶಿ ಕಾರಿಡಾರ್ ರೀತಿ ಉಡುಪಿಯ ಕಾರಿಡಾರ್‌ನ್ನು ಅಭಿವೃದ್ಧಿ ಪಡಿಸುವಂತೆ ಶ್ರೀಗಳು ಮನವಿ ಮಾಡಿದ್ದಾರೆ. ಲಕ್ಷಕಂಠ ಗೀತಾ ಕಾರ್ಯಕ್ರಮ ಅಂಗವಾಗಿ ಭಗವದ್ಗೀತೆಯ ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಗಿದೆ.

