ಜಿ20 ಶೃಂಗಸಭೆಯಲ್ಲಿ ಮುಖಾಮುಖಿಯಾದ ಪ್ರಧಾನಿ ಮೋದಿ- ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹಾಗು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾಗಿದ್ದಾರೆ.

ಮಂಗಳವಾರ ರಾತ್ರಿ ಆಯೋಜಿಸಲಾಗಿದ್ದ ಔತಣಕೂಟದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.

ಚೀನಾ-ಭಾರತ ಮಧ್ಯೆ 2020ರಲ್ಲಿ ನಡೆದ ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಉಭಯ ನಾಯಕರು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

ಇದೀ ಈ ಘಟನೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾಗಿದ್ದು, ಕೈಕುಲುಕಿ ಶುಭಾಶಯ ವಿನಿಮಯ ಮಾಡಿದ್ದಾರೆ.

 

ಜಿ-20 ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ  ಜೋಸೆಫ್ ಆರ್. ಬಿಡೆನ್ ಅವರನ್ನು ಭೇಟಿಯಾದರು.ಅಲ್ಲದೆ ಬ್ರಿಟನ್ ನೂತನ ಪ್ರಧಾನಿ ರಿಷಿಕ್ ಸುನಾಕ್ ಅವರನ್ನು ಭೇಟಿ ಮಾಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!