ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ದೂರಿಯಾಗಿ ಮುಕ್ತಾಯವಾಗಿದೆ. ಇದರ ನೆನಪಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಸೂರ್ಯನಿಂದ ಲಾಭ ಪಡೆಯುವ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯನ್ನು ಆರಂಭ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjV
— Narendra Modi (@narendramodi) January 22, 2024
ಅಯೋಧ್ಯೆಯಿಂದ ದೆಹಲಿಗೆ ವಾಪಾಸ್ ಆದ ಬೆನ್ನಲ್ಲಿಯೇ ತಮ್ಮ ಮೊದಲ ನಿರ್ಧಾರವೇ ಇದಾಗಿದೆ ಎಂದು ಅವರು ಹೇಳಿದ್ದಾರೆ. ‘ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವು ಮತ್ತಷ್ಟು ಬಲಗೊಂಡಿದೆ. ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಮೋದಿ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.