ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಹೊಸದಿಗಂತ ವರದಿ ಕಲಬುರಗಿ :

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ನಡೆಯಲಿರುವ ಹಕ್ಕು ಪತ್ರ ವಿರತಣಾ ಕಾಯ೯ಕ್ರಮದಲ್ಲಿ ಭಾಗಿಯಾಗಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಗಮನವಾಗಿದೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾಜ್ಯದ ಘನವೆತ್ತ ರಾಜ್ಯಪಾಲರಾದ ತಾವರಚೆಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಪೀಲ್ ಸೇರಿದಂತೆ ಪ್ರಮುಖರು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಕಲಬುರಗಿ ವಿಮಾನ ನಿಲ್ದಾಣ ದಿಂದ ನೇರವಾಗಿ ವಿಶೇಷ ಹೆಲಿಪ್ಯಾಡ್ ಮೂಲಕ ಯಾದಗಿರಿ ಜಿಲ್ಲೆಯ ಕೊಡೆಕಲ್ ಗೆ ತೆರಳಿರುವ ಮೋದಿ,ನಂತರ ಮಧ್ಯಾಹ್ನ 2 ಗಂಟೆ ಸಮಾರಿಗೆ ಮಳಖೇಡ ಕಾಯ೯ಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!