ಅರಮನೆ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಭೋಪಾಲ್ ನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಮಂಡಕಳ್ಳಿ ಏರ್ ಪೋರ್ಟ್ ನಿಂದ ಮೈಸೂರಿನ ಮಹಾರಾಜಾ ಕಾಲೇಜು ಮೈದಾನಕ್ಕೆ ತೆರಳಲಿದ್ದು, ಮಹಾರಾಜ ಕಲೇಜು ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಬಳಿಕ ಮೈಸೂರಿನಿಂದ ಮಂಗಳೂರಿಗೆ ಪ್ರಧಾನಿ ಮೋದಿ ತೆರಳಲಿದ್ದು, ಕಡಲ ನಗರಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!