ಭಾರತ-ಆಸ್ಟ್ರೇಲಿಯಾ ಟೆಸ್ಟ್‌ ಸರಣಿ ನೋಡಲು ಪ್ರಧಾನಿ ಮೋದಿ ಆಗಮನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೆಸ್ಟ್ ಪಂದ್ಯವನ್ನು ನೋಡಲು ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಅಂತಿಮ ಟೆಸ್ಟ್ ಪಂದ್ಯವನ್ನು ಮೋದಿ ವೀಕ್ಷಿಸಲಿದ್ದಾರೆ. ಅಷ್ಟೇ ಅಲ್ಲ ಪಂದ್ಯ ವೀಕ್ಷಣೆಗಾಗಿ ಆಗಮಿಸುವಂತೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಕೂಡ ಆಹ್ವಾನಿಸಲಾಗಿದೆ. ಆಸೀಸ್‌ ಪ್ರಧಾನಿ ಭಾರತಕ್ಕೆ ಬರಲಿದ್ದು, ಎರಡೂ ದೇಶಗಳ ಪ್ರಧಾನ ಮಂತ್ರಿಗಳು ಕ್ರೀಡಾಂಗಣದಲ್ಲಿ ಆಟಗಾರರನ್ನು ಪ್ರೋತ್ಸಾಹಿಸಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಆಡಲು ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬರಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಸರಣಿಯ ಮುಂದಿನ ಮೂರು ಟೆಸ್ಟ್ ಪಂದ್ಯಗಳು ದೆಹಲಿ, ಧರ್ಮಶಾಲಾ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿವೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಎಲ್ಲಾ ಪಂದ್ಯಗಳನ್ನು ಗೆಲ್ಲುವುದು ಭಾರತಕ್ಕೆ ಬಹಳ ಮುಖ್ಯವಾಗಿದೆ. ಟೀಂ ಇಂಡಿಯಾ ಈ ಎಲ್ಲಾ ಪಂದ್ಯಗಳನ್ನು ಗೆದ್ದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸುವ ಪ್ರಬಲ ಸ್ಪರ್ಧಿಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!