ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ಹೊಸ ಸರ್ಕಾರದ ಬಗ್ಗೆ ಆಲೋಚನೆಗಳನ್ನು ಹಂಚಿಕೊಳ್ಳಲು ನನಗೆ ಕರೆ ಮಾಡಿದರು ಜೊತೆಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ವಿಶ್ವಾಸ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಕೀರ್ತಿಗೆ ಕೊಂಡೊಯ್ಯಲಿ ಎಂದು ಗೌಡ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!