ಥಾಮಸ್ ಕಪ್ ಚಾಂಪಿಯನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ: 1 ಕೋಟಿ ರೂ. ಬಹುಮಾನ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡವು ಥಾಮಸ್ ಕಪ್​ನ್ನು ಮೊದಲ ಬಾರಿಗೆ ಗೆದ್ದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಫೋನ್​ ಕರೆ ಮೂಲಕ ಮಾತನಾಡಿ ಅಭಿನಂದಿಸಿದ್ದಾರೆ. ಬ್ಯಾಂಕಾಕ್‌ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಚಿನ್ನದ ಪದಕಕ್ಕೆ ಮುತ್ತಿಕ್ಕುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಭಾರತ ತಂಡವು ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿದ ನಂತರ, ಪ್ರಧಾನಿ ಮೋದಿ ಅವರು ಆಟಗಾರರೊಂದಿಗೆ ವೈಯಕ್ತಿಕವಾಗಿ ಫೋನ್​ ಕರೆಯಲ್ಲಿ ಮಾತನಾಡಿದರು.

ಥಾಮಸ್ ಕಪ್ ಗೆದ್ದು 135 ಕೋಟಿ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ ನಮ್ಮ ಬ್ಯಾಡ್ಮಿಂಟನ್ ಚಾಂಪಿಯನ್‌ಗಳೊಂದಿಗೆ ವಿಶೇಷ ಸಂವಾದ ಎಂದು ಮೋದಿ ವಿಡಿಯೋದೊಂದಿಗೆ ಟ್ವೀಟ್​ ಮಾಡಿದ್ದಾರೆ.

ಒಂದು ಕೋಟಿ ರೂ. ಬಹುಮಾನ:
ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಕ್ರೀಡಾ ಸಚಿವಾಲಯವು ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾನುವಾರ 1 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಬ್ಯಾಡ್ಮಿಂಟನ್ ಸಾಧಕರಿಗೆ ದೇಶಾದ್ಯಂತ ಅಭಿನಂದನೆ ವ್ಯಕ್ತವಾಗಿದ್ದು, ಹಲವು ಕ್ರೀಡಾ ದಿಗ್ಗಜರು, ಪ್ರಮುಖ ರಾಜಕೀಯ ಮುಖಂಡರು ಸೇರಿದಂತೆ ಹಲವರು ಟ್ವೀಟ್​ ಮೂಲಕ ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!