ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ (Mysuru Dasara) ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ (Balarama Elephant) ಭಾನುವಾರ ಸಾವಿಗೀಡಾಯಿತು. ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.
‘ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ’” ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಬಲರಾಮ ಆನೆ (67) ಭಾನುವಾರ ಸಾವನ್ನಪ್ಪಿತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿತು.