ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಾಜಿ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ (82) ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಚೌಧರಿ ಅಜಿತ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಅವರು ಕೇಂದ್ರದಲ್ಲಿ ಹಲವಾರು ಇಲಾಖೆಗಳ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು. ರೈತರ ಹಿತಾಸಕ್ತಿಗಾಗಿ ಶ್ರಮಿಸಿದ್ದರು. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪ ಎಂದಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021