September 28, 2026
Monday, September 28, 2026
spot_img

ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ರಾಜಕಾರಣಿ ಹಾಗೂ ಮಾಜಿ ರೈಲ್ವೆ ಸಚಿವ ಮೂಕುಲ್ ರಾಯ್ ಅವರು ಸೋಮವಾರ ಬೆಳಿಗ್ಗೆ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ನಿಧನರಾದರು. 73 ವರ್ಷದ ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿ, ರಾಯ್ ಅವರ ರಾಜಕೀಯ ಅನುಭವ ಹಾಗೂ ಸಮಾಜಸೇವೆಯನ್ನು ಸ್ಮರಿಸಿದರು. ಕುಟುಂಬದವರಿಗೆ ಧೈರ್ಯ ಕೋರಿ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ:

ರಾಯ್ ಅವರು ಮಮತಾ ಬ್ಯಾನರ್ಜಿ ಅವರ ಆಪ್ತ ಸಹಚರರಾಗಿದ್ದು, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದರು. ಸಂಘಟನೆ ಕಟ್ಟುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಯುಪಿಎ-2 ಅವಧಿಯಲ್ಲಿ ಹಡಗು ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು ಹಾಗೂ ಬಳಿಕ ರೈಲ್ವೆ ಸಚಿವಾಲಯದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ರಾಜಕೀಯ ಬದುಕಿನಲ್ಲಿ ಅವರು ಕಾಂಗ್ರೆಸ್, ತೃಣಮೂಲ ಹಾಗೂ ಬಿಜೆಪಿ ಪಕ್ಷಗಳೊಂದಿಗೆ ಸಂಚರಿಸಿ ಹಲವು ಏರಿಳಿತಗಳನ್ನು ಕಂಡಿದ್ದರು. ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿಯೂ ವಿಚಾರಣೆಗೆ ಒಳಪಟ್ಟಿದ್ದರು. ಅವರ ನಿಧನದಿಂದ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಖಾಲಿತನ ಉಂಟಾಗಿದೆ.

Must Read