ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’ ಎಂದು ಅವರು ಬರೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023
ಶುಕ್ರವಾರ ಮಧ್ಯಾಹ್ನದ ವೇಳೆಗೆ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅದಾಗಲೇ ತೀವ್ರ ನಿಶ್ಯಕ್ತರಾಗಿದ್ದ ಲೀಲಾವತಿ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.