Thursday, August 18, 2022

Latest Posts

ಕಠಿಣ ಪರಿಶ್ರಮದ ಫಲಿತಾಂಶವೇ ಬೆಳ್ಳಿ, ಕಂಚು: ಅವನಿ ಲೇಖರ, ಪ್ರವೀಣ್ ಕುಮಾರ್ ಅಭಿನಂದಿಸಿದ ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಮತ್ತೊಂದು ಪದಕ ಗೆದ್ದು ದಾಖಲೆ ನಿರ್ಮಿಸಿದರುವ ಅವನಿ ಲೇಖರ, ಹಾಗೂ ಪುರುಷರ ಹೈಜೆಂಪ್ ವಿಭಾಗದಲ್ಲಿ ಬೆಳ್ಳಿ ಗೆದ್ದಿರುವ ಪ್ರವೀಣ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರವೀಣ್ ಕುಮಾರ್ ಅವರ ಬೆಳ್ಳಿ ಪದಕ ಅವರ ಕಠಿಣ ಪರಿಶ್ರಮದ ಫಲಿತಾಂಶ. ಅವರಿಗೆ ನನ್ನ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು” ಎಂದಿದ್ದಾರೆ.

“ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಲೇಖರಾ ಅವರ  ಅತ್ಯದ್ಭುತ ಪ್ರದರ್ಶನದಿಂದ ಹರ್ಷ ಗೊಂಡಿದ್ದೇನೆ.  ಭಾರತದ ಮನೆಗೆ ಕಂಚಿನ ಪದಕ ತಂದಿದ್ದಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ” ಎಂದು ಮತ್ತೊಂದು ಟ್ವೀಟ್ ನಲ್ಲಿ ಅವನಿಯವರನ್ನು ಅಭಿನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!