‘ಭಾರತ ರತ್ನ’ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಹಾಗೂ ಪಿ.ವಿ.ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆ ಹೇಳಿದ್ದಾರೆ.

‘ ದೇಶಕ್ಕಾಗಿ ಪಿ.ವಿ. ನರಸಿಂಹ ರಾವ್ ಅವರು ನೀಡಿದ ಕೊಡುಗೆಯನ್ನು ಪ್ರತಿಯೊಬ್ಬ ಭಾರತೀಯನೂ ಗೌರವಿಸುತ್ತಾನೆ. ಅವರಿಗೆ ಭಾರತ ರತ್ನ ನೀಡಿದ್ದಕ್ಕಾಗಿ ಹೆಮ್ಮೆ ಪಡುತ್ತಾರೆ. ವಿದ್ವಾಂಸರಾಗಿ, ಚಿಂತಕರಾಗಿ ದೇಶದ ಪ್ರಗತಿ ಮತ್ತು ಆಧುನೀಕರಣಕ್ಕೆ ಹಗಲಿರುಳು ಶ್ರಮಿಸಿದರು. ಅವರ ಆರ್ದಶಗಳನ್ನು ಎಂದೆಂದಿಗೂ ಪಾಲಿಸಲಾಗುತ್ತದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

‘ಭಾರತದ ಅಭಿವೃದ್ಧಿಗೆ, ವಿಶೇಷವಾಗಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಚರಣ್ ಸಿಂಗ್ ಅಪಾರ ಕೊಡುಗೆ ನೀಡಿದ್ದಾರೆ. ಈ ಗೌರವವು ಅವರು ಪ್ರತಿಪಾದಿಸಿದ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸಾರ್ವಜನಿಕ ಸೇವೆಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ’ ಎಂದು ಪ್ರಧಾನಿ ಹೇಳಿದ್ದಾರೆ.

‘ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಕರ್ಪೂರಿ ಠಾಕೂರ್ ಅವರಿಗೆ ‘ಭಾರತ ರತ್ನ’ವು ಸೂಕ್ತ ಗೌರವವಾಗಿದೆ. ದೀನದಲಿತರ ಹೋರಾಟಗಾರ ಎಂದೇ ಖ್ಯಾತರಾಗಿರುವ ಠಾಕೂರ್‌ ಅವರು ಹಿಂದುಳಿದವರ ಉನ್ನತಿಗೆ ನೀಡಿದ ಕೊಡುಗೆಗಳು ಭಾರತೀಯ ಸಮಾಜದಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ’ ಎಂದು ಪ್ರಧಾನಿ ತಿಳಿಸಿದರು.

, ‘ಕೃಷಿ ಜಗತ್ತಿನಲ್ಲಿ ಸ್ವಾಮಿನಾಥನ್ ಪೂಜ್ಯ ವ್ಯಕ್ತಿ’ ಎಂದು ಬಣ್ಣಿಸಿದ್ದಾರೆ. ಅವರ ಪ್ರಯತ್ನದ ಫಲವಾಗಿ ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬನೆಯತ್ತ ಸಾಗಿದೆ. ಅವರಿಗೆ ನೀಡಲಾದ ‘ಭಾರತ ರತ್ನ’ವು ಕೃಷಿ ಮತ್ತು ಆಹಾರ ಭದ್ರತೆಯಲ್ಲಿ ಸಂಶೋಧನೆ ಮಾಡಲು ಹೆಚ್ಚಿನ ಜನರನ್ನು ಪ್ರೇರೇಪಿಸಲಿ ಎಂದು ಪ್ರಧಾನಿ ಆಶಿಸಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌ‍ಪದಿ ಮುರ್ಮು ಅವರು ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!